ನಾಳೆ ವಿಶ್ವ ಆದಿವಾಸಿ ದಿನಾಚರಣೆ

Update: 2026-08-10 22:46 IST

ಬೆಂಗಳೂರು : ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ, ಕರ್ನಾಟಕ ರಾಜ್ಯ ಪಂಚ ಬುಡಕಟ್ಟು ಸಂರಕ್ಷಣಾ ಸಮಿತಿಯ ವತಿಯಿಂದ ಆ.11ರ ಬೆಳಗ್ಗೆ 10:30ಕ್ಕೆ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಅಲೆಮಾರಿ ಬುಡಕಟ್ಟು ಮಹಾಸಭಾದ ಸಂಸ್ಥಾಪಕ ಗೌರವಾಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಟ ಪ್ರಕಾಶ್ ರಾಜ್, ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್‌. ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಸಿ.ನಾಗರಾಜ್, ಪಂಚ ಬುಡಕಟ್ಟು ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಜಗ್ಗು, ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಮಹಿಳಾ ಅಧ್ಯಕ್ಷೆ ಲತಾ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News