‘ತಾಲೂಕು ಮಾನಸಿಕ ಆರೋಗ್ಯ’ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅನುಮೋದನೆ

Update: 2026-08-13 19:59 IST


ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿನ ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ ಹಾಗು ಕೊಪ್ಪಳದ 31 ತಾಲೂಕುಗಳಲ್ಲಿ (ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಹೊರತುಪಡಿಸಿ) 10.04ಕೋಟಿ ರೂ. ಮೊತ್ತದಲ್ಲಿ ಎರಡು ವರ್ಷ ತಾಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಪ್ರಮುಖ ಸಮಸ್ಯೆಯಾಗಿ ಕಾಡುತ್ತಿರುವ ಮಾನಸಿಕ ಆರೋಗ್ಯ ತೊಂದರೆಯನ್ನು ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ನಿವಾರಿಸಬೇಕು ಹಾಗೂ ಆರೋಗ್ಯವನ್ನು ಬಲಪಡಿಸಬೇಕಾಗಿದೆ. ಈಗಾಗಲೇ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದು ಸಮುದಾಯ ಮಟ್ಟದಲ್ಲಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ.

ಇದೀಗ ತಾಲೂಕು ಮಟ್ಟದಲ್ಲಿ ಮಾನಸಿಕ ಆರೋಗ್ಯ ಸೇವೆಗಳನ್ನು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ತಾಲೂಕು ಮಾನಸಿಕ ಆರೋಗ್ಯ ವಿಸ್ತರಣೆ ಕಾರ್ಯಕ್ರಮವನ್ನು 10,04,40,000 ರೂ. ಮೊತ್ತದಲ್ಲಿ ಜಾರಿಗೊಳಿಸಲು ರಾಯಚೂರು, ಯಾದಗಿರಿ, ಕೊಪ್ಪಳದಲ್ಲಿ ತಲಾ 5 ತಾಲೂಕುಗಳು ಹಾಗೂ ಬೀದರ್‍ನಲ್ಲಿ 9 ಹಾಗೂ ಕಲಬುರಗಿಯಲ್ಲಿ 7 ತಾಲೂಕುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News