ಉಗ್ರ ಸಂಘಟನೆಯೊಂದಿಗೆ ನಂಟು ಆರೋಪ: ಶಂಕಿತನ ಬಂಧನ

Update: 2026-08-15 23:36 IST

ಬೆಂಗಳೂರು : ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ಶಂಕಿತನೊಬ್ಬನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆ ಮೂಲದ ಅಸಫುಲ್ ಮಲ್ಲಿಕ್(25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ನೆಲೆಸಿದ್ದ ಆರೋಪಿ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದ ಖಾಸಗಿ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಡಿಸಿಪಿ ನಾರಾಯಣ್ ಎಂ. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News