ಬೆಂಗಳೂರು-ಮಂಗಳೂರು ಜಂಕ್ಷನ್ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06581 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಮಂಗಳೂರು ಜಂಕ್ಷನ್ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಆ.23ರಂದು ಓಡಿಸಲಿದೆ.
ವಿವರ: ಈ ವಿಶೇಷ ರೈಲು ಆ.23(ರವಿವಾರ)ರಂದು ಸಂಜೆ 4:40ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟು ಆ.24(ಸೋಮವಾರ)ರಂದು ಬೆಳಗ್ಗೆ 9:30ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಲಿದೆ.
ಮಾರ್ಗಮಧ್ಯೆ ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಪೋದನೂರು ಜಂಕ್ಷನ್, ಪಾಲಕ್ಕಾಡ್, ಶೋರ್ನೂರು, ತಿರೂರ್, ಕೊಳಿಕ್ಕೋಡ್, ವಡಕರ, ತಲಶ್ಶೇರಿ, ಕಣ್ಣೂರು, ಪಯ್ಯನೂರು, ಕನ್ಹನ್ಗಡ್ ಮತ್ತು ಕಾಸರಗೋಡು ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ. ಈ ವಿಶೇಷ ರೈಲು 20 ಕೋಚ್‌ಗಳನ್ನು ಒಳಗೊಂಡಿದ್ದು, ಒಂದು ಎಸಿ 2-ಟೈರ್ ಬೋಗಿ, ಮೂರು ಎಸಿ 3-ಟೈರ್ ಬೋಗಿಗಳು, ಹತ್ತು ಸ್ಲೀಪರ್ ದರ್ಜೆ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳನ್ನು ಒಳಗೊಂಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.