ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಶುಕ್ರವಾರದಂದು ಇಲ್ಲಿನ ಅಪರಾಧ ತನಿಖಾ ಇಲಾಖೆ(ಸಿಐಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಆಗಮಿಸಿ, ಪ್ರಕರಣದ ತನಿಖಾಧಿಕಾರಿ ಎಸಿಪಿ ರಾಘವೇಂದ್ರ ಹೆಗ್ಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇನ್ನು ಕೆಪಿಎಸ್‍ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸಿಐಡಿ ಮುಂದೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.

ನೇಮಕಾತಿ ಅಕ್ರಮಗಳನ್ನು ಈ.ಡಿ. ಮತ್ತು ಸಿಐಡಿ ಎರಡೂ ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಪ್ರಕರಣದ ಹಣಕಾಸಿನ ಅಂಶಗಳನ್ನು ಈ.ಡಿ. ಪರಿಶೀಲಿಸುತ್ತಿದ್ದರೆ, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳು ಮತ್ತು ವಿವಿಧ ಅಧಿಕಾರಿಗಳ ಪಾತ್ರದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor