ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಕುರಿತು ಸ್ಪಷ್ಟನೆ ನೀಡಲಾಗಿದ್ದು, ಬಾಕಿ ಇರುವ ಪಿಎಫ್ ಮೊತ್ತ 3.05 ಲಕ್ಷ ರೂ.ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಸ್ಪಷ್ಟಣೆ ನೀಡಲಾಗಿದೆ.

ಮೈಸೂರಿನ ಪೇಪರ್ ಮಿಲ್ಸ್‌ ನಿಂದ ಚಂದ್ರಶೇಖರನ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ವಿಲೀನಗೊಳಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ಘಟನೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ ನಿರ್ದೇಶನದಂತೆ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ನೌಕರರ ಶಾಸನಬದ್ಧ ಕಡಿತಗಳ ಮೊತ್ತವನ್ನು ಜಮಾ ಮಾಡುವ ಉದ್ದೇಶಕ್ಕಾಗಿ ಬ್ಯಾಂಕ್ ಖಾತೆ ತೆರೆಯಲು ಅನುಮತಿ ನೀಡಲಾಯಿತು.

ಅದರಂತೆ 2026ರ ಜುಲೈ 22ರಂದು ಬ್ಯಾಂಕ್ ಖಾತೆಯನ್ನು ತೆರೆಯಲಾಗಿದೆ.ಬಾಕಿ ಇರುವ 3.05 ಲಕ್ಷ ರೂ. ಪಿಎಫ್ ಮೊತ್ತವನ್ನು ಶೀಘ್ರದಲ್ಲೇ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor