ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂಗಳೂರು : ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿಗಾಗಿ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಅರ್ಹ ಅಭ್ಯರ್ಥಿಗಳು https://shp.karnataka.gov.in ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-2286 6718, 79758 93879, 96632 24416 81058 60522 ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂ.ನಗರ ಜಿಲ್ಲೆ, ಪೋಡಿಯಂ ಬ್ಲಾಕ್, 1ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.