ಸಾಂದರ್ಭಿಕ ಚಿತ್ರ

ಬೆಂಗಳೂರು : ಇಲ್ಲಿನ ನೃಪತುಂಗ ರಸ್ತೆಯಲ್ಲಿನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಆವರಣದಲ್ಲಿ ಇಂದು(ಸೆ.25) ನಡೆಯುವ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ಪೂಜೆ ಹಾಗೂ ಮಧ್ಯಾಹ್ನದ ಭೋಜನಕೂಟದಲ್ಲಿ ಕಚೇರಿಯ ಸಿಬ್ಬಂದಿ ತಪ್ಪದೇ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಪೊಲೀಸ್ ಇಲಾಖೆಯು ಸುತ್ತೋಲೆಯೊಂದನ್ನು ಹೊರಡಿಸಿದೆ.

ಗುರುವಾರ ಈ ಸಂಬಂಧ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಪರವಾಗಿ ಐಪಿಎಸ್ ಅಧಿಕಾರಿಯಾದ ಸೌಮೇಂದು ಮುಖರ್ಜಿ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಪ್ರಧಾನ ಕಚೇರಿಯ ಆವರಣದಲ್ಲಿ ಸೆ.25ರ ಬೆಳಗ್ಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ಮತ್ತು 1.30ಕ್ಕೆ ಭೋಜನವನ್ನು ಹಾಗೂ ಸಂಜೆ 4 ಗಂಟೆಗೆ ಗಣೇಶ ಮೂರ್ತಿಗೆ ಪೂಜೆ ಮಾಡಿ ವಿರ್ಜನೆ ಮಾಡಲಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯ ಮತ್ತು ರಾಜ್ಯ ಗುಪ್ತವಾರ್ತೆಯ ಎಲ್ಲ ಅಧಿಕಾರಿ ಸೇರಿ ಎಲ್ಲ ಪೊಲೀಸ್ ಸಿಬ್ಬಂದಿ ಪೂಜೆಗೆ ಹಾಗೂ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿರುವ ಮಧ್ಯಾಹ್ನದ ಭೋಜನ ಕೂಟದಲ್ಲಿ ತಪ್ಪದೇ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor