ಬೆಂಗಳೂರು : ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಿಂದ ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆ ನಡೆದಿದ್ದು ಸಿ.ಎಂ.ಧನಂಜಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ ಆರ್.ರಾಜಣ್ಣ, ಉಪಾಧ್ಯಕ್ಷರಾಗಿ ಶಿವಮೂರ್ತಿ, ಭಾರತೀಯ ವಕೀಲರ ಪರಿಷತ್ ಸದಸ್ಯರಾಗಿ ಸಿ.ಎಂ.ಧನಂಜಯ ಆಯ್ಕೆ ಆಗಿದ್ದಾರೆ ಎಂದು ರಾಜ್ಯ ವಕೀಲರ ಪರಿಷತ್ ತಿಳಿಸಿದೆ. ಆಯ್ಕೆ ಆದ ನೂತನ ಪದಾಧಿಕಾರಿಗಳು ರಾಜ್ಯದ ವಕೀಲರ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor