ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ಇಲಾಖೆಯ ಆವರಣದಲ್ಲಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅನಂತರ ಇಲಾಖೆಯ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಇಲಾಖೆಯ ಜಂಟಿ ನಿರ್ದೇಶಕರಾದ ಸಿ.ಆರ್.ನವೀನ್, ಮಂಜುನಾಥ್ ಡೊಳ್ಳಿನ್, ಸಿದ್ದೇಶ್ವರಪ್ಪ ಜೆ.ಬಿ., ಉಪ ನಿರ್ದೇಶಕರಾದ ರಾಮಲಿಂಗಪ್ಪ, ಶಫಿ ಸಾದುದ್ದೀನ್, ಆಡಳಿತಾಧಿಕಾರಿ ಎಂ.ಕೆ. ಕಿರಣ್ ಸೇರಿದಂತೆ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor