ಮುಖ್ಯಮಂತ್ರಿ ಚಂದ್ರುಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಪ್ರತಿಷ್ಠಿತ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ಹಿರಿಯ ಚಿತ್ರನಟ ಮುಖ್ಯಮಂತ್ರಿ ಚಂದ್ರು ಆಯ್ಕೆಯಾಗಿದ್ದಾರೆ.
ರವಿವಾರ ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಗೌರವಾಧ್ಯಕ್ಷ ವ.ಚ.ಚನ್ನೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರು ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕ, ಫಲ ತಾಂಬೂಲ ನೀಡಿ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.