ಹಿಂ.ವರ್ಗಗಳ ವಿವಿಧ ನಿಗಮಗಳ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು : ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿದಾರರರು ಅರ್ಜಿ ಸಲ್ಲಿಸಲು ಅವಧಿ ಅ.15ರ ವರೆಗೆ ವಿಸ್ತರಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ-ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಫಲಾನುಭವಿಗಳು https://sevasindhu.karnataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಅ.15, ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 080-2353 9601 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ಉತ್ತರ ಜಿಲ್ಲೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.