ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬ್ಯಾಕ್‍ಲಾಗ್ (ಹಿಂಬಾಕಿ) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪರಾಮರ್ಶಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಸಭೆ ಗುರುವಾರ ವಿಕಾಸಸೌಧದಲ್ಲಿ ನಡೆಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ.ರಘುಮೂರ್ತಿ, ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ನೋಡಲ್ ಏಜೆನ್ಸಿ ಸಲಹೆಗಾರ ಡಾ.ಇ.ವೆಂಕಟಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor