ಸಾಂದರ್ಭಿಕ ಚಿತ್ರ | Photo Credit : PTI

ಬೆಂಗಳೂರು : ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವ ‘ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ’ದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಗುರುವಾರ ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿಯೂ ಆಗಿರುವ ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ದಯಾನಂದ ಭಂಡಾರಿ ಅವರು, ಅಧಿಸೂಚನೆ ಹೊರಡಿಸಿದ್ದು, ಸೆ.10ರ ಬೆಳಗ್ಗೆ 11ಗಂಟೆಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳಿಗೆ ‘ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ.

ಬ್ಯಾಂಕಿನ ಆಡಳಿತ ಮಂಡಳಿಗೆ ಆಯ್ಕೆಯಾದ ಎಲ್ಲ ನಿರ್ದೇಶಕರುಗಳು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಸಭೆಗೆ ಆಗಮಿಸಿ ಚನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ದಯಾನಂದ ಭಂಡಾರಿ ಅವರು ತಿಳಿಸಿದ್ದಾರೆ.

ಸೆ.10ರ ಬೆಳಗ್ಗೆ 9ಗಂಟೆಯಿಂದ 11 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆ, ಬೆಳಗ್ಗೆ 11ರಿಂದ 11:15ರ ವರೆಗೆ ಉಮೇದುವಾರಿಕೆ ಪರಿಶೀಲನೆ, ಬೆಳಗ್ಗೆ 11:15ರಿಂದ ಉಮೇದುವಾರಿಕೆ ಅರ್ಜಿಯ ಪಟ್ಟಿ ಪ್ರಕಟಣೆ, ಬೆಳಗ್ಗೆ 11:15ರಿಂದ 11:45ರ ವರೆಗೆ ಉಮೇದುವಾರಿಕೆ ಹಿಂಪಡೆಯವುದು, ಅಗತ್ಯವಿದ್ದಲ್ಲಿ ಬೆಳಗ್ಗೆ 11:55ರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor