×
Ad

ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

Update: 2025-07-22 20:36 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಯಾನೆ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿನಗರ ಠಾಣೆಯ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಅವಿನಾಶ್, ಮುರುಗೇಶ್, ನರಸಿಂಹ ಹಾಗೂ ಸುದರ್ಶನ್ ಎಂಬುವರನ್ನು ಕೋಲಾರದ ಟೆಕಲ್ ಬಳಿ ಮಂಗಳವಾರ ಬೆಳಗ್ಗೆ ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಪಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಮೀನು ವಿಚಾರಕ್ಕಾಗಿ ಜುಲೈ 15ರಂದು ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆ ಬಳಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮ್ಯುವೆಲ್ ಎಂಬವರನ್ನು ಬಂಧಿಸಲಾಗಿತ್ತು. ಕೃತ್ಯ ನಡೆಸಲು ಕಾರು ನೀಡಿದ ಆರೋಪ ಮೇರೆಗೆ ಅರುಣ್ ಹಾಗೂ ನವೀನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಹತ್ಯೆಗೆ ಸುಪಾರಿ ಪಡೆದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News