ಬೆಂಗಳೂರಿನಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ
Update: 2025-10-12 21:48 IST
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.12 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 11.95 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ.
ರವಿವಾರ ಐದು ನಗರ ಪಾಲಿಕೆಗಳಲ್ಲಿ 1,35,732 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಅದೇ ರೀತಿ, 9 ದಿನಗಳಲ್ಲಿ ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಜಿಬಿಎ ಪ್ರಕಟನೆ ತಿಳಿಸಿದೆ.