×
Ad

ಬೆಂಗಳೂರು | ಡ್ರಗ್ಸ್ ದಂಧೆ: ಆರೋಪಿ ಬಂಧನ, 1.2 ಕೋಟಿ ರೂ.ಮೌಲ್ಯದ ಮಾಲು ಜಪ್ತಿ

Update: 2025-06-17 19:32 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಅವಧಿಯಿಂದಲೂ ಸಕ್ರಿಯನಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ ಬರೋಬ್ಬರಿ 1.2 ಕೋಟಿ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾ ಮೂಲದ ಚಿಕ್ವುಮಾ ಬಂಧಿತ ಆರೋಪಿ. ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ ಮಾದಕ ದ್ರವ್ಯ ನಿಗ್ರಹದಳದ ಪೊಲೀಸರು, ಆತನನ್ನು ಬಂಧಿಸಿ ಬರೋಬ್ಬರಿ 1.2 ಕೋಟಿ ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಯು ಕಡಿಮೆ ಬೆಲೆಗೆ ಮಾದಕ ಪದಾರ್ಥಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು, ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿತ್ತು ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News