×
Ad

ಬೆಂಗಳೂರು | ಪತ್ನಿಯನ್ನು ಹತ್ಯೆಗೈದು ಸೂಟ್​ಕೇಸ್​ನಲ್ಲಿ ತುಂಬಿದ ಪ್ರಕರಣ : ಪತಿ ರಾಕೇಶ್ ಕಡೇಕರ್​ಗೆ 14 ದಿನ ನ್ಯಾಯಾಂಗ ಬಂಧನ

Update: 2025-03-30 14:21 IST

ಬೆಂಗಳೂರು : ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್​ಕೇಸ್​ನಲ್ಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಕೇಶ್ ಕಡೇಕರ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರವಿವಾರ ಕೋರಮಂಗಲ ಎನ್​​ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿದ್ದು, ರಾಕೇಶ್​ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.

ಇನ್ನೂ ಪ್ರಕರಣ ಸಂಬಂಧ ಆರೋಪಿ ರಾಕೇಶ್ ತಂದೆ ರಾಜೇಂದ್ರ ಕೆಡೇಕರ್ ಪ್ರತಿಕ್ರಿಯಿಸಿದ್ದು, ಮೃತ ಗೌರಿ ನನ್ನ ಸಹೋದರಿಯ ಮಗಳು. ರಾಕೇಶ್ -ಗೌರಿ ಮದುವೆಗೆ ನಮ್ಮ ಕುಟುಂಬದ ಒಪ್ಪಿಗೆ ಇರಲಿಲ್ಲ. ಮದುವೆ ವಿಚಾರಕ್ಕೆ ಕುಟುಂಬದ ಜೊತೆ ಗೌರಿ ಜಗಳ ಮಾಡಿಕೊಂಡಿದ್ದರು. ಎರಡು ವರ್ಷದ ಹಿಂದೆ ಪರಿವಾರದ ವಿರೋಧದ ನಡುವೆಯೂ ಮದುವೆ ಆಗಿದ್ದರು. ಗೌರಿ ಯಾವಾಗಲೂ ನನ್ನ ಮಗ ಮತ್ತು ಕುಟುಂಬಸ್ಥರ ಜೊತೆ ಹಲವು ಬಾರಿ ಜಗಳ ಆಡಿದ್ದಳು. ಗಂಡ-ಹಂಡತಿ ಮತ್ತು ಕುಟುಂಬದ ಜಗಳ ಪೊಲೀಸ್ ಠಾಣೆ ಮೇಟ್ಟಿಲೇರಿತ್ತು ಎಂದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News