×
Ad

ಬೇಸಿಗೆ: ಮಾರ್ಚ್ 15ರಿಂದ ಮೇ 31ರವರೆಗೆ ಕಪ್ಪು ಕೋಟ್ ಧರಿಸಲು ವಿನಾಯಿತಿ

Update: 2025-03-14 12:08 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಪ್ರಸಕ್ತ ಬೇಸಿಗೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ್ದು ಮಾರ್ಚ್ 15ರಿಂದ ಮೇ 31 ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯದಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪ ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ಕಷ್ಟ ಕೋಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷರು ಕ್ರಮವಾಗಿ ಮಾರ್ಚ್ 3 ಮತ್ತು 4ರಂದು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಮಾರ್ಚ್ 15ರಿಂದ ಮೇ 31ರವರೆಗೆ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಯಗಳ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸಲು ವಿನಾಯಿತಿ ನೀಡಲಾಗಿದೆ. ಆದರೆ ಈ ವಿನಾಯಿತಿಯು ಬಿಳಿ ಶರ್ಟ್ ಮತ್ತು ಬ್ಯಾಂಡ್ ಧರಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಸುತ್ತೋಲೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News