×
Ad

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ : ದಿನೇಶ್ ಗುಂಡೂರಾವ್

Update: 2025-11-03 00:09 IST

ಬೆಂಗಳೂರು : ‘ದೇಶದಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಆದರೂ, ಅಂಗಾಂಗಗಳ ಕೊರತೆ ಇರುವುದು ನಿಜ. ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುಂದೆಬರಬೇಕಾದ ಅವಶ್ಯಕತೆಯಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ರವಿವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಅಂಗಾಂಗ ಕಸಿ ನಡೆಸಲು ಆರೋಗ್ಯ ಸುರಕ್ಷಾ ಟ್ರಸ್ಟ್‌ನಡಿ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 84ಕ್ಕೆ ಏರಿಕೆಯಾಗಿವೆ. ಆರೋಗ್ಯ ಇಲಾಖೆಯಿಂದ ದರ ನಿಗದಿ ಮಾಡಲಾಗಿದ್ದು, ಜೀವಸಾರ್ಥಕತೆ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿದವರು ಈ ಆಸ್ಪತ್ರೆಗಳಲ್ಲಿ ಉಚಿತವಾಗಿ ಅಂಗಾಂಗ ಕಸಿ ಮಾಡಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದ್ದಾರೆ.

‘ಇದರಿಂದಾಗಿ ಅಂಗಾಂಗ ದಾನವು ಹೆಚ್ಚಾಗುವ ನೀರಿಕ್ಷೆಯಿದೆ. ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಮಿದುಳು ನಿಷ್ಕ್ರೀಯಗೊಂಡ ವ್ಯಕ್ತಿಗಳಿಂದ ಕುಟುಂಬದ ಅನುಮತಿಯೊಂದಿಗೆ ಅಂಗಾಂಗ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News