ನೊಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ-2023ಕ್ಕೆ ರಾಷ್ಟ್ರಪತಿ ಅಂಕಿತ: ಕೃಷ್ಣಬೈರೇಗೌಡ
Update: 2025-08-13 21:08 IST
ಬೆಂಗಳೂರು, ಆ.13: ನೋಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ-2023ಕ್ಕೆ ರಾಷ್ಟ್ರಪತಿಯವರ ಅಂಕಿತ ಪಡೆದು ನೋಂದಣಿ ಕಾಯ್ದೆ-1908ಕ್ಕೆ ತಿದ್ದುಪಡಿ ತರಲು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದರಿ ಕಾಯ್ದೆಗೆ ಕರಡು ನಿಯಮಗಳು ಅಂತಿಮವಾದ ಕೂಡಲೇ ನೋಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ 2023 ಅನ್ನು ಜಾರಿಗೆ ತರುವ ಕುರಿತು ದಿನಾಂಕವನ್ನು ಗೊತ್ತುಪಡಿಸಲಾಗುವುದು ಎಂದರು.