×
Ad

‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ

Update: 2025-11-17 23:51 IST

ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್‍ಮೆಂಟ್‍ನ ಪ್ರತಿನಿಧಿ ಮಂಡಳಿಯು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾದ ‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಯ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಈ ಯೋಜನೆಗೆ ಕೆಎಂಡಿಸಿಯು 5 ಕೋಟಿ ರೂ.ಮೀಸಲಿಟ್ಟಿದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿರುವುದರಿಂದ ಲಭ್ಯವಿರುವ ಅನುದಾನ ಸಾಕಾಗುವುದಿಲ್ಲ. ಹೆಚ್ಚಿನ ಸ್ಟಾರ್ಟ್‌ ಅಪ್‍ಗಳಿಗೆ ಬೆಂಬಲ ಒದಗಿಸಲು ಹೆಚ್ಚುವರಿ 5ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಅನುದಾನ ವೃದ್ಧಿಯಿಂದ ಅಲ್ಪಸಂಖ್ಯಾತ ಸಮುದಾಯದ ಹೊಸ ಉದ್ಯಮಗಳು ಬೆಳೆದು, ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದರ ಫಲಶ್ರುತಿ ರಾಜ್ಯ ಸರಕಾರದ ಅಭಿವೃದ್ಧಿ ದೃಷ್ಟಿಕೋನಕ್ಕೆ ಪೂರಕವಾಗಲಿದೆ. ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ, ಸುಹೈಲ್ ಮಸೂಲ್ದಾರ್ ಮತ್ತಿತರರು ಉಪಸ್ಥಿತರಿದ್ದರೆಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News