ನಿಂದನೆ ಆರೋಪ | ವಕೀಲ ಕೆ.ಎನ್.ಜಗದೀಶ್‌ಗೆ ಜಾಮೀನು
Update: 2025-08-23 21:27 IST
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಬಂಧಿತರಾಗಿದ್ದ ವಕೀಲ ಕೆ.ಎನ್.ಜಗದೀಶ್ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ತಮ್ಮ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೆ.ಎನ್.ಜಗದೀಶ್, ಕೊಡಿಗೇಹಳ್ಳಿ ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ 7 ವರ್ಷಕ್ಕಿಂತಲೂ ಕಡಿಮೆ ಶಿಕ್ಷೆ ಇದೆ. ಹಾಗಾಗಿ, ನನಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ" ಎಂದು ಮಾಹಿತಿ ನೀಡಿದ್ದಾರೆ.
ಎರಡು ಭಿನ್ನ ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ವಕೀಲ ಜಗದೀಶ್ ವಿರುದ್ಧ ಮಂಜುನಾಥ್ ಎಂಬುವವರು ದೂರು ನೀಡಿದ್ದರು.