×
Ad

ʼಬ್ಯಾಲೆಟ್ ಪೇಪರ್ ಮೂಲಕ ಚುನಾವಣೆʼ ಬಿಜೆಪಿಯವರಿಗೆ ಭಯವೇಕೆ?: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Update: 2025-09-06 18:31 IST

ಬೆಂಗಳೂರು, ಸೆ. 6: ‘ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ನಿರ್ಧಾರಕ್ಕೆ ಸರಕಾರ ಮುಂದಾಗಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೋಗವೂ ಸಮ್ಮತಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸಬೇಕು ಎಂಬುದೇ ಸರಕಾರದ ಉದ್ದೇಶ. ಹೀಗಿರುವಾಗ ಪ್ರಾಮಾಣಿಕವಾಗಿ ಚುನಾವಣೆ ಎದುರಿಸಲು ಬಿಜೆಪಿಯವರಿಗೆ ಭಯವ್ಯಾಕೆ?’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಶನಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ನಮ್ಮ ಸರಕಾರ ನಿರ್ಧರಿಸಿದೆ. ಇಷ್ಟಕ್ಕೆ ವಿಚಲಿತವಾಗಿರುವ ಬಿಜೆಪಿ ನಾಯಕರು ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ವರ್ತಿಸುವುದು ಯಾಕೆ? ಬ್ಯಾಲೆಟ್ ಮೂಲಕ ಚುನಾವಣೆ ನಡೆದರೆ ಮತ ಅಕ್ರಮ ನಡಸಲು ಸಾಧ್ಯವಿಲ್ಲ ಎಂಬುದು ಅವರ ಆತಂಕಕ್ಕೆ ಕಾರಣವೆ?’ ಎಂದು ಕೇಳಿದ್ದಾರೆ.

‘ಈಗಾಗಲೇ ಹಲವು ಮುಂದುವರಿದ ದೇಶಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುತ್ತಿದೆ. ಇದಕ್ಕೆ ಕಾರಣವೇ ಇವಿಎಂಗಳಲ್ಲಿ ನಡೆಯುತ್ತಿರುವ ಅಕ್ರಮಗಳು. ಇತ್ತೀಚಿಗೆ ರಾಹುಲ್ ಗಾಂಧಿಯವರು ಮತ ಅಕ್ರಮ ಬಯಲಿಗೆಳೆದ ನಂತರ ಇವಿಎಂ ಮೇಲೆ ಹಾಗೂ ಕೇಂದ್ರ ಚುನಾವಣಾ ಆಯೋಗದ ಮೇಲೆ ವಿಶ್ವಾಸರ್ಹತೆಯೇ ಕುಂದಿದೆ’ ಎಂದು ದಿನೇಶ್ ಗುಂಡೂರಾವ್ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News