ಬೆಂಗಳೂರು : ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾಗಿ ನಿಡಸಾಲೆ ಪುಟ್ಟಸ್ವಾಮಯ್ಯ ಆಯ್ಕೆಯಾಗಿದ್ದಾರೆ.

ಶನಿವಾರ ನಗರದಲ್ಲಿ ನಡೆದ ಸರ್ವ ಸದಸ್ಯರ ಮಹಾಸಭೆಯಲ್ಲಿ 2026-27ರಿಂದ 2030-31ರ ವರೆಗಿನ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಡಾ. ಬೈರಮಂಗಲ ರಾಮೇಗೌಡ, ಕೆ.ಎಸ್. ಮುರಳಿ, ಕಾರ್ಯದರ್ಶಿಯಾಗಿ ಆರ್. ದೊಡ್ಡೆಗೌಡ, ಜಂಟಿ ಕಾರ್ಯದರ್ಶಿಯಾಗಿ ಬಿ.ಕೆ.ಸುರೇಶ್, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಂ. ಚಂದ್ರಕೀರ್ತಿ, ಕೃಷ್ಣಮೂರ್ತಿ, ಖಜಾಂಚಿಯಾಗಿ ವಿ. ಹೇಮಂತ್ ಕುಮಾರ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಆರ್.ಗಿರಿರಾಜು, ಪ್ರವೀಣ್ ಜಗಾಟ, ಪದ್ಮಲತಾ ಮೋಹನ್, ಎ.ರಘುವೀರ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor