ಗ್ರಾ.ಪಂ. ಉಪಚುನಾವಣೆ: ಮೇ 28ಕ್ಕೆ ಮತ ಎಣಿಕೆ
Update: 2025-05-26 22:26 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ವಿವಿಧ ಕಾರಣಗಳಿಂದ ತೆರವಾಗಿದ್ದ ಗ್ರಾಮ ಪಂಚಾಯಿತಿಯ ಒಟ್ಟು 68 ಸ್ಥಾನಗಳಿಗೆ ಮೇ 25ರಂದು ನಡೆದ ಉಪ ಚುನಾವಣೆ ಶಾಂತಿಯುತ ಅಂತ್ಯ ಕಂಡಿದ್ದು, ಒಟ್ಟಾರೆ 57.39ರಷ್ಟು ಮತದಾನವಾಗಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳ ಒಟ್ಟು 68 ಗ್ರಾ.ಪಂ.ಗಳ ಒಟ್ಟು 68 ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಮೇ 28ರ ಬೆಳಗ್ಗೆ 8ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.