×
Ad

ದ್ವಿತೀಯ ಪಿಯುಸಿ ಪರೀಕ್ಷೆ-3 ವೇಳಾಪಟ್ಟಿ ಪ್ರಕಟ

Update: 2025-05-16 20:38 IST

ಸಾಂದರ್ಭಿಕ ಚಿತ್ರ

ಬೆಂಗಳೂರು : 2024-25ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.9ರಂದು ಕನ್ನಡ, ಅರೇಬಿಕ್, ಜೂ.10ರಂದು ಇತಿಹಾಸ, ಭೌತಶಾಸ್ತ್ರ, ಜೂ.11ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಜೂ.12ರಂದು ಅರ್ಥಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಜೂ.13ರಂದು ಇಂಗ್ಲಿಷ್‌, ಜೂ.14ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗೃಹ ವಿಜ್ಞಾನ, ಜೂ.16ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಭೂಗರ್ಭಶಾಸ್ತ್ರ, ಜೂ.17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಜೂ.18ರಂದು ಹಿಂದಿ, ಜೂ.19ರಂದು ಮೂಲಗಣಿತ, ಮನಃಶಾಸ್ತ್ರ, ಭೂಗೋಳಶಾಸ್ತ್ರ, ಜೂ.20ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಪ್ರೆಂಚ್ ಭಾಷಾ ಪರೀಕ್ಷೆಗಳು ನಡೆಯಲಿವೆ.

2025ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಫಲಿತಾಂಶ ಸುಧಾರಣೆ ಬಯಸಿದ ವಿದ್ಯಾರ್ಥಿಗಳನ್ನು ಮತ್ತು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಳ್ಳಲು ಪಿಯು ಕಾಲೇಜುಗಳಿಗೆ ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News