×
Ad

ತುಮಕೂರು : ಮೇ 31ರಂದು ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಹೋರಾಟ; ಹೋರಾಟ ಸಮಿತಿ ಸಭೆಯಲ್ಲಿ ನಿರ್ಣಯ

Update: 2025-05-26 23:55 IST

ತುಮಕೂರು : ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರುದ್ಧ ಜಿಲ್ಲಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸಲು ಹಾಗೂ ಇದರ ಜೊತೆಯಲ್ಲಿ ಕಾನೂನು ಹೋರಾಟ ಮಾಡಿ ಕೆನಾಲ್ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡಲು ಸೋಮವಾರ ನಗರದಲ್ಲಿ ನಡೆದ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ ನಿರ್ಣಯ ಕೈಗೊಂಡಿತು.

ವಿವಿಧ ಪಕ್ಷಗಳ ಮುಖಂಡರು, ರೈತಸಂಘ, ಹಲವು ಸಂಘಟನೆಗಳ ಪ್ರಮುಖರು ಸೇರಿದ್ದ ಸಭೆಯಲ್ಲಿ ಮೇ 31ರಂದು ಲಿಂಕ್ ಕೆನಾಲ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಮುತ್ತಿಗೆ ಹಾಕುವ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಕುಪ್ಪೂರು ಗದ್ದುಗೆ ಮಠದ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ರೇವಣಸಿದ್ದೇಶ್ವರ ಮಠದ ಬಿಂದುಶೇಖರ ಒಡೆಯರ್ ಸ್ವಾಮೀಜಿ ಭಾಗವಹಿಸಿದ್ದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಬಿಜೆಪಿ ಮುಖಂಡ ದಿಲೀಪ್‌ಕುಮಾರ್, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೊಂವಿಂದರಾಜು, ಹೋರಾಟ ಸಮಿತಿ ಸಂಚಾಲಕ ಪ್ರಭಾಕರ್ ಮಾತನಾಡಿದರು.

ಗುಬ್ಬಿಯ ಜೆಡಿಎಸ್ ಮುಖಂಡ ನಾಗರಾಜು, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದರಾಮಣ್ಣ, ವಕೀಲ ಶಿವಕುಮಾರ್, ಮುಖಂಡರಾದ ವೆಂಕಟೇಗೌಡ, ಭೈರಪ್ಪ, ಪಂಚಾಕ್ಷರಯ್ಯ, ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News