ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ನೇಮಕಾತಿ ಪ್ರಕಟ
ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂ.18 ರಂದು ಕಾಲೇಜು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://dce.karnataka.gov.inನಲ್ಲಿ ಪ್ರಕಟಿಸಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿತ್ತು. ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ದಾಖಲೆಗಳನ್ನು ಪ್ರಾಂಶುಪಾಲರ ನೇಮಕಾತಿ ವಿಶೇಷ ನಿಯಮಗಳು, 2020ರ ನಿಯಮ 3(1)ರಲ್ಲಿ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯನ್ವಯ ಪರಿಶೀಲಿಸಿ, ಶೈಕ್ಷಣಿಕವಾಗಿ ಅರ್ಹರಾಗಿರುವ ಹಾಗೂ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್ https://dce.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.
ಸಂಬಂಧಪಟ್ಟ ಅಭ್ಯರ್ಥಿಗಳು ಸದರಿ ಪಟ್ಟಿಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಇ-ಮೇಲ್ ವಿಳಾಸ dceprincipals@gmail.com ಮೂಲಕ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.