×
Ad

ಕೆಎಸ್‍ಎಂಸಿಎ ಸಂಸ್ಥೆಯಿಂದ ಸರಕಾರಕ್ಕೆ 34.13 ಕೋಟಿ ರೂ. ಲಾಭ

Update: 2025-11-07 00:15 IST

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 34.13 ಕೋಟಿ ರೂ.ಗಳ ಲಾಭವನ್ನು ಸರಕಾರಕ್ಕೆ ನೀಡಲಾಯಿತು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮತ್ತು ಕೆಎಸ್‍ಎಂಸಿಎ ಸಂಸ್ಥೆಯ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಅವರು ವಿಧಾನಸೌಧದಲ್ಲಿ ವಿಶೇಷ ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಕೆಎಸ್‍ಎಂಸಿಎ ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆಯಿಂದ ಕೈಬಿಟ್ಟು ಹೋಗಿರುವುದರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭ ಕಡಿಮೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‍ಎಂಸಿಎ ಸಂಸ್ಥೆಗೆ ವಹಿಸಿಕೊಡಬೇಕು ಎಂದು ತಿಳಿಸಿದರು.

ಕೆಎಸ್‍ಎಂಸಿಎ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಮಾತನಾಡಿ, ಸರಕಾರವು ಕೆಎಸ್‍ಎಂಸಿಎ ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರ್ಪಡೆ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕು ಎಂದು ವಿನಂತಿಸಿದರು. ಈ ಸಂದರ್ಭದಲ್ಲಿ ಕೆಎಸ್‍ಎಂಸಿಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರದಾನ ವ್ಯವಸ್ಥಾಪಕ ಪಿ.ಎಸ್.ನಂದೀಶ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News