×
Ad

'ಆರೋಗ್ಯ ಕವಚ' ಸೇವೆ ಬಲಪಡಿಸಲು 3,691 ಹುದ್ದೆ ನೇಮಕಕ್ಕೆ ಆದೇಶ

Update: 2025-10-09 22:39 IST

ಬೆಂಗಳೂರು, ಅ. 9: ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು (ಆಂಬುಲೆನ್ಸ್) ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3,691 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಹುದ್ದೆಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ನಿಯೋಜನೆ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು. ಉಳಿದಂತೆ ಎಲ್ಲ ಸಿಬ್ಬಂದಿಗಳನ್ನು ಒಪ್ಪಂದ ಅಥವಾ ಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗುವುದು. ಅದಕ್ಕಾಗಿ 10 ಕೋಟಿ ರೂ.ಗಳನ್ನು ನಿಗದಿ ಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News