×
Ad

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ

Update: 2025-11-27 22:13 IST

ಬೆಂಗಳೂರು : ವಿಶ್ವಕಪ್ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡ ಹಾಗೂ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬೆಳ್ಳಿ ಗೆದ್ದಿರುವ ರಾಜ್ಯದ ಇಬ್ಬರು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ., ಬಹುಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿ ತಲಾ 5 ಲಕ್ಷ ರೂ., ಬಹುಮಾನವನ್ನು ಮುಖ್ಯಮಂತ್ರಿ ಪ್ರಕಟಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿ ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ,. ಚೆಕ್ ವಿತರಿಸುವಂತೆ ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋಂವಿಂದರಾಜು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕರಾದ ರವೀಂದ್ರ, ಕಾರ್ಯದರ್ಶಿ ರಾಜೇಶ್, ತರಬೇತುದಾರ ಬಿ.ಎನ್.ಸುಧಾಕರ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News