×
Ad

ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಅನುಷ್ಟಾನಕ್ಕೆ 6ಕೋಟಿ ರೂ. ಮಂಜೂರು

Update: 2025-07-15 21:38 IST

 ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರಾಜ್ಯ ಸರಕಾರವು ಸರಕಾರಿ ಶಾಲೆಗಳಲ್ಲಿ 3 ರಿಂದ 5ನೇ ತರಗತಿಗಳ ಮಕ್ಕಳಿಗೆ ಮೂಲ ಗಣಿತ ವಿಷಯದ ಪರಿಕಲ್ಪನೆಯನ್ನು ಅರ್ಥೈಸುವ ‘ಗಣಿತ ಗಣಕ’ ಕಾರ್ಯಕ್ರಮಕ್ಕೆ 6 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಿದೆ.

2025-26ನೇ ಸಾಲಿನಲ್ಲಿ ರಾಜ್ಯದ 13,51,642 ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಿಂದ ಅನುಕೂಲವಾಗಲಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾರ್ಯಕ್ರಮದಡಿ ಮೂಲ ಗಣಿತ ವಿಷಯ ಪರಿಕಲ್ಪನೆಗಳನ್ನು ಶಿಕ್ಷಕರಿಂದ ಮಕ್ಕಳಿಗೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ(ರಿಮೋಟ್ ಟ್ಯೂಟರಿಂಗ್) ಅರ್ಥೈಸಲಾಗುತ್ತದೆ. ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು, ಶಿಕ್ಷಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಿ ಶಿಕ್ಷಕರಲ್ಲಿ ಅಗತ್ಯ ಕೌಶಲ್ಯಗಳನ್ನು ವೃದ್ಧಿಸಿ ಕಾರ್ಯಕ್ರಮವನ್ನು ನಿರ್ವಹಿಸಲು ಉದ್ದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News