ಕ್ಷೇತ್ರ ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿ ರಚನೆ : ಮಾ.7ರೊಳಗೆ ವರದಿ ಸಲ್ಲಿಸಲು ಸೂಚನೆ
Update: 2025-03-02 22:58 IST
ಸಾಂದರ್ಭಿಕ ಚಿತ್ರ | Meta AI
ಬೆಂಗಳೂರು : ಎಲ್ಲ ಸರಕಾರಿ ಶಾಲೆಗಳಿಗೆ ಸಂಬಂಧಿಸಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿಗಳನ್ನು ರಚಿಸಬೇಕು ಎಂದು ಸರಕಾರ ಆದೇಶಿಸಿದ್ದು, ಮಾ.7ರೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಿದೆ.
ಫೆ.21ರಂದು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿಗಳನ್ನು ರಚಿಸಲು ಆದೇಶಿಸಲಾಗಿತ್ತು. ಹೀಗಾಗಿ ಶಾಸಕರ ನೇತೃತ್ವದಲ್ಲಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಉಪನಿರ್ದೇಶಕರ ಅನುಮೋದನೆಯನ್ನು ಪಡೆಯಲು ಸೂಚಿಸಲಾಗಿದೆ. ಹಾಗೆಯೇ ಇದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುಮೋದನೆ ಪಡೆದು ಶಾಲಾ ಶಿಕ್ಷಣ ಇಲಾಖೆಗೆ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.