×
Ad

ಬೆಂಗಳೂರು | ಟಿಡಿಆರ್ ಹಗರಣ: 9 ಕಡೆ ಈಡಿ ದಾಳಿ

Update: 2025-05-23 22:28 IST

ಸಾಂದರ್ಭಿಕ ಚಿತ್ರ | PC: PTI

ಬೆಂಗಳೂರು :ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್) ಹಗರಣಕ್ಕೆ ಸಂಬಂಧಿಸಿದಂತೆ ಈಡಿ ಅಧಿಕಾರಿಗಳು ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಕಂಪೆನಿಗೆ ಸೇರಿದ 9 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.

ಶುಕ್ರವಾರ ಇಲ್ಲಿನ ರಿಚ್ಮಂಡ್ ರಸ್ತೆಯಲ್ಲಿರುವ ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈ ಲಿಮಿಟೆಡ್ ಕಂಪೆನಿ ಕಚೇರಿ ಹಾಗೂ ನಿರ್ದೇಶಕರ ಮನೆಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಹಲವು ದಾಖಲೆಗಳನ್ನು ಈಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈ.ಲಿಮಿಟೆಡ್ ಕಂಪೆನಿ ವಿರುದ್ಧ ಟಿಡಿಆರ್ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾಲ್ಮರ್ಕ್ ಮಾಲಕ ರತನ್ ಲಾತ್ ಅವರು ಡಿಸಿಆರ್ ಪಡೆದು, 27 ಕೋಟಿಯಷ್ಟು ಟಿಡಿಆರ್ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಎಸಿಬಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಇದೇ ಪ್ರಕರಣದಲ್ಲಿ ಇದೀಗ ಈಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News