×
Ad

ಮುಂಗಾರು ಅಧಿವೇಶನ | ವಿಧಾನಸಭೆಯಲ್ಲಿ 9 ವಿಧೇಯಕಗಳ ಮಂಡನೆ

Update: 2025-08-13 21:40 IST

ಬೆಂಗಳೂರು, ಆ.13 : 2025ನೆ ಸಾಲಿನ ಕರ್ನಾಟಕ ದೇವದಾಸಿ(ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ ಸೇರಿದಂತೆ 9 ವಿಧೇಯಕಗಳನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

2025ನೆ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ(ತಿದ್ದುಪಡಿ)ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮತ್ತು ಕೆಲವು ಇತರ ಕಾನೂನುಗಳ(ತಿದ್ದುಪಡಿ) ವಿಧೇಯಕ.

ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ವಿಧೇಯಕ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕøತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಅಂತರ್ಜಲ(ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ)ವಿಧೇಯಕಗಳನ್ನು ಮಂಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News