×
Ad

ಬೆಂಗಳೂರು: ಆಟದ ಮೈದಾನದಲ್ಲಿ ಗೇಟ್ ಬಿದ್ದು ಸಾವಿಗೀಡಾದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ಚೆಕ್ ವಿತರಣೆ

Update: 2024-09-25 19:30 IST

ಬೆಂಗಳೂರು: ಮಲ್ಲೇಶ್ವರದ ಆಟದ ಮೈದಾನದಲ್ಲಿ ಗೇಟ್ ಬಿದ್ದು ಸಾವಿಗೀಡಾದ ನಿರಂಜನ್ ಪೋಷಕರಿಗೆ ಬುಧವಾರದಂದು ಒಟ್ಟು 10 ಲಕ್ಷ ರೂ.ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಾಲಕನ ಮನೆಗೆ ಭೇಟಿ ನೀಡಿ, ನಿರಂಜನ್ ತಂದೆ-ತಾಯಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರದ ಚೆಕ್ ವಿತರಿಸಲಾಯಿತು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ‘ಪ್ರಕರಣ ಕುರಿತು ಈಗಾಗಲೇ ಇಂಜಿನಿಯರ್ ಶ್ರೀನಿವಾಸ್‍ರನ್ನು ಅಮಾನತ್ತು ಮಾಡಲಾಗಿದೆ. ಘಟನೆ ಆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಲಾಗಿದೆ ಎಂದು ಹೇಳಿದರು.

ಮೃತ ಬಾಲಕನ ಕುಟುಂಬಸ್ಥರು ಸಮಾಜಕ್ಕೆ ಒಳ್ಳೆದಾಗಲಿ ಎಂದು ಕಣ್ಣು ದಾನ ಮಾಡಿದ್ದಾರೆ. ನಿಜಕ್ಕೂ ಇದು ಮೆಚ್ಚುವಂತಹ ಕಾರ್ಯವಾಗಿದೆ. ಬಾಲಕನ ತಂಗಿಯ ವಿದ್ಯಾಭ್ಯಾಸವನ್ನು ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ. ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಬೆಂಗಳೂರಿನಲ್ಲಿರುವ ಎಲ್ಲ ಪಾರ್ಕ್‍ಗಳ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News