×
Ad

ಆ.30ರಿಂದ ಅಮೆರಿಕದಲ್ಲಿ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗಿ

Update: 2024-08-27 14:54 IST

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಬೆಂಗಳೂರು, ಆ.27: ಇದೇ ತಿಂಗಳ 30ರಿಂದ ಸೆಪ್ಟಂಬರ್ 1ರ ವರೆಗೆ ಅಮೆರಿಕದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಲ್ಲಿ 12ನೇ 'ಅಕ್ಕ ವಿಶ್ವ ಕನ್ನಡ ಸಮ್ಮೇಳನ' ಜರುಗಲಿದೆ.

ಸಮ್ಮೇಳನದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದು, ಅಮೆರಿಕ ಸೇರಿದಂತೆ ಸುತ್ತಲಿನ ದೇಶಗಳಲ್ಲಿ ವಾಸಿಸುವ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕರ್ನಾಟಕದ ಹೊರಗಡೆಯಿಂದ ನಡೆಯುತ್ತಿರುವ ಅತಿದೊಡ್ಡ ಕನ್ನಡದ ಉತ್ಸವ ಎಂದೇ ಪರಿಗಣಿಸಲಾಗುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ಈ ಬಾರಿ, ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ಡಿಸಿ ಇಂದ ದಕ್ಷಿಣಾಭಿಮುಖವಾಗಿ ಸುಮಾರು 110 ಮೈಲು ದೂರದಲ್ಲಿರುವ ವರ್ಜೀನಿಯಾ ರಾಜ್ಯದ ರಾಜಧಾನಿಯಾಗಿರುವ ರಿಚ್ಮಂಡ್ ನಗರದಲ್ಲಿ ನಡೆಯಲಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಕನ್ನಡಿಗರು ಒಂದೇ ಸೂರಿನಡಿಯಲ್ಲಿ ಸೇರುತ್ತಿರುವುದು ವಿಶೇಷವಾಗಿದೆ.

ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿ, ರಕ್ಷಣೆ ಕುರಿತು ವಿವಿಧ ಗೋಷ್ಠಿಗಳು, ಚಿಂತನ-ಮಂಥನ, ಸಂವಾದಗಳು ಜರುಗಲಿದ್ದು, ಅತ್ಯುತ್ತಮ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ. ಕರ್ನಾಟಕದ ವಿವಿಧ ಬಗೆಯ ರುಚಿಕರ ತಿಂಡಿ-ತಿನಿಸುಗಳು, ವಿವಿಧ ವಾಣಿಜ್ಯ ಮತ್ತು ವ್ಯಾಪಾರ ಮೇಳ ಹಾಗೂ ಮಳಿಗೆಗಳು, ಕಲೆ ಮತ್ತು ಸಾಹಿತ್ಯಿಕ ವೇದಿಕೆಗಳು, ಮಹಿಳಾ ವೇದಿಕೆ, ಯುವ ವೇದಿಕೆ, ವಿದ್ಯಾ ಸಂಸ್ಥೆಗಳ ಹಳೇ ವಿದ್ಯಾರ್ಥಿಗಳ ಮಹಾಸಂಗಮ, ವಿವಿಧ ಕ್ರೀಡಾಕೂಟಗಳು, ಆರೋಗ್ಯ ಮತ್ತು ಅಧ್ಯಾತ್ಮಿಕ ವೇದಿಕೆಗಳು ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಈ ಬಾರಿಯ ಅಕ್ಕ ಸಮ್ಮೇಳನದ ವಿಶೇಷ ಆಕರ್ಷಣೆಗಳಾಗಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News