ನ.16ಕ್ಕೆ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ
ಸಾಂದರ್ಭಿಕ ಚಿತ್ರ
ಬೆಂಗಳೂರು : ಇತ್ತೀಚೆಗೆ ನಡೆದ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಚುನಾಯಿತರಾಗಿರುವ ನೂತನ ಸದಸ್ಯರು ನ.16ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ವಿಕಾಸಸೌಧದ ಕೊಠಡಿ ಸಂಖ್ಯೆ-419ರಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು, ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಚುನಾಯಿತರಾಗಿರುವ ಎ.ಪಿ.ರಂಗನಾಥ, ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಿಂದ ಚುನಾಯಿತರಾಗಿರುವ ಕೆ.ಎಂ.ಸುರೇಶ್, ಪಶ್ಚಿಮ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ವಿ.ಸಂಕನೂರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿರುವ ಶಶಿಲ್ ಜಿ.ನಮೋಶಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.