×
Ad

23 ಮಂದಿ ಐಎಫ್‍ಎಸ್ ಅಧಿಕಾರಿಗಳಿಗೆ ಭಡ್ತಿ

Update: 2026-01-01 20:31 IST

ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಪ್ರಯುಕ್ತ 23 ಮಂದಿ ಐಎಫ್‍ಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ.

ಧಾರವಾಡ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಅವರನ್ನು ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರು(ಕಾರ್ಯ ಯೋಜನೆ) ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿ ಪ್ರಿಯಾ ಅವರನ್ನು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರು(ಹುಲಿ ಯೋಜನೆ) ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಪಿ., ಅವರನ್ನು ಮೈಸೂರು(ಹುಲಿ ಯೋಜನೆ)ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ಭಡ್ತಿ ನೀಡಲಾಗಿದೆ.

ಬಳ್ಳಾರಿ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ನಾಯಕ ಕೆ. ಅವರನ್ನು ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು(ಕೇಂದ್ರ ಕಚೇರಿ) ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ಅವರನ್ನು ಬೆಂಗಳೂರಿನ ಅರಣ್ಯ ಸಂಪನ್ಮೂಲ ನಿರ್ವಹಣಾ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ, ಕೇಂದ್ರ ಸರಕಾರದ ನಿಯೋಜನೆ ಮೇರೆಗೆ ಡೆಹ್ರಾಡೂನ್‍ನಲ್ಲಿರುವ ಭಾರತೀಯ ವನ್ಯಜೀವಿ ಸಂಸ್ಥೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಿಜ್ಞಾನಿ ಮಾರಿಯಾ ಕ್ರಿಸ್ತು ರಾಜ ಡಿ. ಅವರನ್ನು ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಡ್ತಿ ನೀಡಲಾಗಿದೆ.

ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಅವರನ್ನು ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿ(ಕಾರ್ಯ ಯೋಜನೆ), ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಡಿ., ಅವರನ್ನು ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿ(ಕಾರ್ಯ ಯೋಜನೆ)ಯಾಗಿ ಭಡ್ತಿ ನೀಡಲಾಗಿದೆ.

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯಕಾರಿ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸೂರ್ಯ ಸೇನ್, ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್., ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ಕರ್ನಾಟಕ ಮತ್ಸ್ಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ.ಸಿ.ಬಾಲಚಂದ್ರ, ಬೆಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ(ಸಂಶೋಧನೆ) ರಮೇಶ್ ಬಿ.ಆರ್, ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಕೆಂಚಪ್ಪನವರ್ ಅವರರನ್ನು ಭಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಪಿ.ಕೆ.ಎಂ., ಹುಣಸೂರು ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಫೀಲ್ಡ್ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಪಿ.ಎ., ಚಾಮರಾಜನಗರ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಬಿ.ಎಸ್., ಕೊಪ್ಪಳ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ ಎನ್.ಕೆ. ಅವರನ್ನು ಭಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.

ವಿಜಯನಗರದ ಹೊಸಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರುಬನಾಥನ್ ಆರ್.ಟಿ. ಅವರನ್ನು ಹುಣಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರದ ಬಿಆರ್‍ಟಿ ಯಳಂದೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ಅವರನ್ನು ಹಾವೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಡ್ತಿ ನೀಡಲಾಗಿದೆ.

ಕೊಳ್ಳೇಗಾಲದ ಮಲೇಮಹದೇಶ್ವರ ಬೆಟ್ಟದ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ್ ಆಹಿರೆ ಅವರನ್ನು ಕೊಳ್ಳೇಗಾಲ ಮಲೇಮಹದೇಶ್ವರ ಬೆಟ್ಟದ ವನ್ಯಜೀವಿ ಉಪ ವಿಭಾಗದ ಹಿರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹಾವೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಝೀಝ್ ಅವರನ್ನು ಕುಂದಾಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಣಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮುಹಮ್ಮದ್ ಫಯಾಝುದ್ದೀನ್ ಅವರನ್ನು ಸಾಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಡ್ತಿ ನೀಡಿ ಆದೇಶಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News