×
Ad

ಮಾ.4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2025-03-01 21:53 IST

ಬೆಂಗಳೂರು : ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಹಾಗೂ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಾ.4ರ ಸಂಜೆ 6ಗಂಟೆಗೆ ನಗರದ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್.ಭೋಸರಾಜು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಉಪಸ್ಥಿತರಿರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News