×
Ad

ಸರಕಾರಿ ಕಾಲೇಜುಗಳ ಪದವಿ ಕೋರ್ಸ್‌ಗಳ ಶುಲ್ಕದಲ್ಲಿ ಶೇ.5ರಷ್ಟು ಹೆಚ್ಚಳ

Update: 2025-05-07 23:58 IST

ಸಾಂದರ್ಭಿಕ ಚಿತ್ರ | PC : Meta AI

ಬೆಂಗಳೂರು: ಎಲ್ಲ ಸರಕಾರಿ ಪದವಿ ಕಾಲೇಜು, ಕಾನೂನು ಕಾಲೇಜು ಹಾಗೂ ಚಿತ್ರಕಲಾ ಪದವಿ ಕಾಲೇಜುಗಳಲ್ಲಿನ ಪದವಿ ಕೋರ್ಸ್‌ಗಳಿಗೆ ಶೇ.5ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿ, ರಾಜ್ಯ ಸರಕಾರವು ಬುಧವಾರ ಸುತ್ತೋಲೆಯನ್ನು ಹೊರಡಿಸಿದೆ.

2025-26ನೇ ಸಾಲಿನ ಪದವಿ ಕೋರ್ಸ್‌ಗಳಿಗೆ ಶುಲ್ಕ ಹೆಚ್ಚಳ ಮಾಡಲಾಗಿದ್ದು, ವಿದ್ಯಾರ್ಥಿಗಳಿಂದ ಶುಲ್ಕವನ್ನು ವಸೂಲಿ ಮಾಡಲು ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಚಿತ್ರಕಲಾ ಕಾಲೇಜುಗಳಿಗೆ ಸಂಬಂಧಿಸಿ ಪರೀಕ್ಷಾ ಶುಲ್ಕವನ್ನು 1,000 ರೂ.ಗಳಿಗೆ ಹಾಗೂ ಪ್ರವೇಶ ಶುಲ್ಕವನ್ನು 500 ರೂ.ಗೆ ಹೆಚ್ಚಳ ಮಾಡಲಾಗಿದೆ. ಸರಕಾರಿ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕ ಮತ್ತು ಪ್ರಯೋಗಾಲಯ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News