×
Ad

ದಂಡದಲ್ಲಿ ಶೇ.50ರಷ್ಟು ರಿಯಾಯಿತಿ: 14 ದಿನಗಳಲ್ಲಿ 18 ಕೋಟಿ ರೂ.ಸಂಗ್ರಹ

Update: 2026-07-05 20:12 IST

ಸಾಂದರ್ಭಿಕ ಚಿತ್ರ PC : PTI

ಬೆಂಗಳೂರು : ರಾಜ್ಯ ಸರಕಾರವು ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇ.50ರಷ್ಟು ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೇವಲ 14 ದಿನಗಳ ಅವಧಿಯಲ್ಲಿ ಒಟ್ಟು 18,15,42,200 ರೂ.ದಂಡ ಪಾವತಿಯಾಗಿದೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ಶೇ.50ರಷ್ಟು ದಂಡವನ್ನು ಮಾತ್ರ ಪಾವತಿಸಲು ಆದೇಶಿಸಿತ್ತು. ಅದರಂತೆ ಜೂ.21ರಿಂದ ಜಾರಿಗೆ ಬಂದಿತ್ತು. ದಂಡವನ್ನು ಪಾವತಿಸಲು ನಿಗದಿಪಡಿಸಲಾಗಿದ್ದ ರಿಯಾಯಿತಿ ಅವಧಿ ಅಂದರೆ ಜೂ.21ರಿಂದ ಜು.4ರವರೆಗೆ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು 18,15,42,200 ರೂ.ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ವಾಹನ ಸವಾರರು ಈ ರಿಯಾಯಿತಿ ದರದಲ್ಲಿ ಬಾಕಿ ದಂಡ ಪಾವತಿಸಲು ಜು.10ರ ವರೆಗೆ ಮಾತ್ರ ಅವಕಾಶವಿದೆ. ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ದಂಡ ಪಾವತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಗರದ ಪ್ರಮುಖ ಜಂಕ್ಷನ್‍ಗಳಲ್ಲಿ ಪಿಎಸ್‍ಐ ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ, ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಸದಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News