×
Ad

ಆ.6ಕ್ಕೆ ಕಲ್ಯಾಣ ಕರ್ನಾಟಕ ವಿಭಾಗಮಟ್ಟದ ಮಾಧ್ಯಮ ತರಬೇತಿ: ಆಯೇಶಾ ಖಾನಂ

Update: 2025-08-01 00:22 IST

ಆಯೇಶಾ ಖಾನಂ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡಮಿಯ ವತಿಯಿಂದ ಬೀದರ್‍ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕಾರ್ಯಕ್ರಮವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿ, ಪರಿಸರ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್ ರೂಂನಲ್ಲಿ ಎಐ ಮತ್ತು ನಾನು ಹಾಗೂ ಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನ ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಪತ್ರಕರ್ತರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಈ ತರಬೇತಿಯು ಪತ್ರಕರ್ತರ ವೃತ್ತಿಕೌಶಲ್ಯವನ್ನು ಉತ್ತಮ ಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಆಯೇಶಾ ಖಾನಂ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಇತರ ಜಿಲ್ಲೆಗಳಿಂದ ಆಗಮಿಸುವ ಮುಂಚಿತವಾಗಿಯೇ ನೋಂದಾಯಿಸಿಕೊಂಡಿರುವ ಪತ್ರಕರ್ತರಿಗೆ ತರಬೇತಿ ದಿನದಂದು ವಸತಿ ಸೌಲಭ್ಯ ಒದಗಿಸಲಾಗುವುದು. ಆಸಕ್ತರು https://forms.gle/uwoA67T1b5gBPDuB8 ಗೂಗಲ್ ಫಾರ್ಮ್ ಭರ್ತಿ ಮಾಡಿ ಆ.2ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News