×
Ad

708 ಹುದ್ದೆಗಳ ನೇಮಕಾತಿಗೆ ಆನ್‍ಲೈನ್ ಅರ್ಜಿ ಆಹ್ವಾನ

Update: 2025-10-09 21:38 IST

ಬೆಂಗಳೂರು, ಅ.9 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅ.9ರಿಂದ ನ.11ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಲಾಗುತ್ತಿದ್ದು, ಪರೀಕ್ಷೆಯು ಒಎಂಆರ್ ಆಧಾರಿತವಾಗಿರುತ್ತದೆ. ಋಣಾತ್ಮಕ ಮೌಲ್ಯಮಾಪನ ಇದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದರಷ್ಟು (1/4) ಅಂಕ ಕಡಿತ ಮಾಡಲಾಗುತ್ತದೆ.

ಒಂದೇ ಪಠ್ಯಕ್ರಮ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು. ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ http://cetonline.Karnataka.gov.in/kea/  ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News