×
Ad

ಕಾರಿನ ಮೇಲೆ ಬಿದ್ದ ಇಟ್ಟಿಗೆ ಚೂರು : ಮೆಟ್ರೊ ವಿರುದ್ಧ ಎಫ್ಐಆರ್ ದಾಖಲು

Update: 2024-11-27 18:00 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಚಲಿಸುತ್ತಿದ್ದ ಕಾರಿನ ಮೇಲೆ ನಮ್ಮ ಮೆಟ್ರೋ ಪಿಲ್ಲರ್‌ನ ಇಟ್ಟಿಗೆ ಚೂರು ಬಿದ್ದು ಕಾರಿಗೆ ಹಾನಿಯಾದ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿ ಜರುಗಿದ್ದು, ಈ ಸಂಬಂಧ ಬಿಎಂಆರ್‌ಸಿಎಲ್ ಅಧಿಕಾರಿಗಳ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೆಟ್ರೋ ಪಿಲ್ಲರ್ 393ರ ಬಳಿ ಘಟನೆ ನಡೆದಿದ್ದು, ಈ ಸಂಬಂಧ ಬಾಗಲೂರು ನಿವಾಸಿ ನವೀನ್ ರಾಜ್ ಎಂಬವರು ನೀಡಿರುವ ದೂರಿನನ್ವಯ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಬಿಎಂಆರ್‌ಸಿಎಲ್‌ನ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಬಿಎಂಆರ್ಸಿಎಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಪರಿಹಾರ ಕೊಡಿಸುವಂತೆ ನವೀನ್ ರಾಜ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನವಿ ಮಾಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News