×
Ad

ಯಲ್ಲಾಪುರ, ಸಿಂಧನೂರು ರಸ್ತೆ ಅಪಘಾತದಲ್ಲಿ ಒಟ್ಟು 14 ಮಂದಿ ಮೃತ್ಯು: ಸಿಎಂ ಸಿದ್ದರಾಮಯ್ಯ ಸಂತಾಪ

Update: 2025-01-22 10:30 IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಗಳಿಗೆ ಚಿರಶಾಂತಿ ಕೋರಿದ ಮುಖ್ಯಮಂತ್ರಿ, ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದವರು ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ಬುಧವಾರ ನಸುಕಿನ ವೇಳೆ ತರಕಾರಿ ತುಂಬಿದ್ದ ಲಾರಿ ಉರುಳಿಬಿದ್ದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಕಳೆದ ರಾತ್ರಿ ಕ್ರೂಸರ್ ವಾಹನವೊಂದು ಟೈರ್ ಸ್ಫೋಟಗೊಂಡು ಉರುಳಿಬಿದ್ದ ಪರಿಣಾಮ ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News