×
Ad

15ನೇ‌ ʼಬೆಂಗಳೂರು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವʼದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕ

Update: 2024-02-28 20:23 IST

photo - twitter

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ  2023-24ನೇ ಸಾಲಿನ ’15ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ. ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಗುರುವಾರ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್‌ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News