×
Ad

ಪೊಲೀಸರ ಮೇಲೆ ಹಲ್ಲೆ ಆರೋಪ : ಆರೋಪಿಗೆ ಗುಂಡೇಟು, ಬಂಧನ

Update: 2025-02-01 23:26 IST

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿ ಆಗಿದ್ದ ಆರೋಪದಡಿ ಓರ್ವನನ್ನು ಎಚ್‍ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ವಾರೆಂಟ್‍ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಶುಕ್ರವಾರ ಎಚ್‍ಎಎಲ್ ಠಾಣೆ ಪೊಲೀಸರ ತಂಡ ತೆರಳಿದಾಗ ಮಾರಕಾಸ್ತ್ರಗಳ ಮೂಲಕ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ.

ಘಟನೆಯಲ್ಲಿ ಎಚ್‍ಎಎಲ್ ಠಾಣೆಯ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿದ್ದವು. ಈ ಸಂಬಂಧ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಬಳಿಯಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದಾಗ ಮತ್ತೆ ದಾಳಿಗೆ ಮುಂದಾಗಿದ್ದು, ಈ ವೇಳೆ ಎಚ್‍ಎಎಲ್ ಠಾಣೆ ಇನ್ಸ್‍ಪೆಕ್ಟರ್ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ, ಆತ ಮತ್ತೆ ನಮ್ಮ ಮೇಲೆ ಹಲ್ಲೆಗೆ ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News