×
Ad

ಭೂ ಕಬಳಿಕೆ ಆರೋಪ | ರೋಹಿಣಿ ಸಿಂಧೂರಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Update: 2024-06-21 19:04 IST

ರೋಹಿಣಿ ಸಿಂಧೂರಿ

ಬೆಂಗಳೂರು : ಭೂ ಕಬಳಿಕೆ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ಸುಧೀರ್ ರೆಡ್ಡಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ವರದಿಯಾಗಿದೆ.

ನಗರದ ಯಲಹಂಕ ನ್ಯೂಟೌನ್ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ, ಆಕೆಯ ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂದನ್ ರೆಡ್ಡಿ, ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್ ಹಾಗೂ ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗಾಯಕ ಲಕ್ಕಿ ಅಲಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದು, 2022ರಲ್ಲಿ ಸುಧೀರ್ ರೆಡ್ಡಿ ಜಮೀನು ಕಬಳಿಸಲು ಪ್ರಯತ್ನಿಸಿದ್ದು, ರೋಹಿಣಿ ಸಿಂಧೂರಿ ಕೂಡಾ ಸಹಾಯ ಮಾಡಿದ್ದರು. ಸ್ಥಳೀಯ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News